ಧರ್ಮಸ್ಥಳದಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಮುಂದಾದ ಸರ್ಕಾರ

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಉಂಟಾಗಿರುವ ನೀರಿನ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ, ಧರ್ಮಸ್ಥಳದಲ್ಲಿ ನೀರಿನ ಅಭಾವವನ್ನ ಗಂಭೀರವಾಗಿ ಪರಿಗಣಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಜೊತೆ ಚರ್ಚಿಸಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಕಳಕಳಿಗೆ ಕೃತಜ್ಞತೆ ವ್ಯಕ್ತಪಡಿಸಿದ ಹೆಗ್ಗಡೆಯವರು ಇನ್ನೊಂದು ಚೆಕ್‍ ಡ್ಯಾಂ ನಿರ್ಮಾಣದ ಅಗತ್ಯವಿದೆ ಎಂದು ತಿಳಿಸಿದ್ದಾರೆ. ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ಸೂಚನೆಯಂತೆ ದ.ಕ.ಜಿ.ಪಂ. ಸಿಇಒ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆಗಾಗಿ ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.