ಧಾರವಾಡ ಜಿಲ್ಲಾಸ್ಪತ್ರೆಗೆ ಸಿಎಂ ಕುಮಾರಸ್ವಾಮಿ ಭೇಟಿ!

ಧಾರವಾಡ: ನಿರ್ಮಾಣ ಹಂತದ ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಸ್ಪತ್ರೆಗೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ನಿಮಗೆ ಬೇಕಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಆದಷ್ಟು ಬೇಗ ನೀವು ಗುಣಮುಖರಾಗುತ್ತೀರಿ ಎಂದು ಗಾಯಾಳುಗಳಿಗೆ ಧೈರ್ಯ ಹೇಳಿದ್ದಾರೆ. ಅಂದ್ಹಾಗೆ ಸಿಎಂ ಜೊತೆ ಮಾಜಿ‌ ಸಚಿವ ‌ಬಸವರಾಜ್‌ ಹೊರಟ್ಟಿ, ಸಿಎಂ ಕಾರ್ಯದರ್ಶಿ ‌ಎನ್.ಎಚ್ ಕೋನರಡ್ಡಿ, ಮಾಜಿ‌ ಸಚಿವ ವಿನಯ್ ಕುಲಕರ್ಣಿ, ಜಿಲ್ಲಾಧಿಕಾರಿ ‌ದೀಪಾ ಚೋಳನ್​​ ‌ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್ ನಾಗರಾಜ್ ಕೂಡ ಉಪಸ್ಥಿತರಿದ್ದರು.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv