ಬಿಜೆಪಿ ವಿರುದ್ಧ ದಂಗೆ: ಸಿಎಂ ಕುಮಾರಸ್ವಾಮಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕ

ಶಿರಸಿ: ರಾಜ್ಯದ ಜನತೆಗೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಕರೆಕೊಡುತ್ತೇನೆ ಅಂತಾ ಹೇಳಿರುವ ಸಿಎಂ ಕುಮಾರಸ್ವಾಮಿ ನಡೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದ್ದು, ಕೂಡಲೇ ಮುಖ್ಯಮಂತ್ರಿಗಳು ಕ್ಷಮೆ ಯಾಚಿಸಬೇಕು ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ವಿರುದ್ಧ ಪೊಲೀಸ್ ಇಲಾಖೆ ಕಾನೂನು ಕ್ರಮಕ್ಕೆ ಮುಂದಾಗಬೇಕು. ಮೈತ್ರಿ ಸರ್ಕಾರದ ಒಳಜಗಳದಿಂದಲೇ ಸರ್ಕಾರ ಬೀಳುವ ಸ್ಥಿತಿ ತಲುಪಿದ್ದರೂ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಏಕಾಏಕಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರ ಮನೆ ಮೇಲೆ ದಾಳಿ ಮಾಡಿ ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ಶಾಸಕ ಕಾಗೇರಿ ಕಿಡಿಕಾರಿದರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv