ಹುಬ್ಬಳ್ಳಿಯಲ್ಲಿ ಮೈತ್ರಿ ಅಭ್ಯರ್ಥಿ ವಿನಯ್ ಕುಲಕರ್ಣಿ ಪರ ಸಿಎಂ ಪ್ರಚಾರ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಸಿಎಂ ಚುನಾವಣೆ ಪ್ರಚಾರ ನಡೆಸಲಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿನಯ್ ಕುಲಕರ್ಣಿ ಪರ ಸಿಎಂ ಮತಯಾಚನೆ ಮಾಡಲಿದ್ದಾರೆ.  ಜೆಡಿಎಸ್ -ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಸಾರ್ವಜನಿಕ ಸಭೆಯಲ್ಲಿ ಸಿಎಂ ಭಾಗಿಯಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನಗರದ ಗೋಕಲ್ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ, ಮೈತ್ತಿ ಪಕ್ಷದ ಸಾರ್ವಜನಿಕ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಪಾಲ್ಗೊಂಡು ವಿನಯ್ ಕುಲಕರ್ಣಿ ಪರ ಪ್ರಚಾರ ಕೈಗೊಳ್ಳಲಿದ್ದಾರೆ. ಈ ವೇಳೆ ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಹೆಚ್ ಕೊನರೆಡ್ಡಿ, ಶಾಸಕ ಪ್ರಸಾದ್ ಅಬ್ಬಯ್ಯ, ಮಾಜಿ ಸಚಿವ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv