ಆದಿಚುಂಚನಗಿರಿಯಲ್ಲಿ ಸಿಎಂ ಅಮಾವಾಸ್ಯೆ ಪೂಜೆ

ಮಂಡ್ಯ: ಅಮವಾಸ್ಯೆ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ದಂಪತಿ ಮಂಡ್ಯದ ಆದಿಚುಂಚನಗಿರಿಯ ಕಾಲ ಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಅಮವಾಸ್ಯೆ ಹಿನ್ನೆಲೆಯಲ್ಲಿ ಕಾಲ ಭೈರವೇಶ್ವರನಿಗೆ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯವನ್ನು ನೇರವೇರಿಸಲಾಯಿತು.

ಮುಂಜಾನೆಯಿಂದಲೇ ಕ್ಷೇತ್ರಾಧಿ ದೇವತೆಗೆಳಿಗೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಪೂಜೆ ಸಲ್ಲಿಸಿದ್ರು. ಇನ್ನೂ ಕುಮಾರಸ್ವಾಮಿ ಆಗಮನ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಗಳನ್ನು ಕೈಗೊಳ್ಳಲಾಗಿತ್ತು.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv