ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಸಿ.ಎಂ.ಉದಾಸಿ ನಾಮಪತ್ರ ಸಲ್ಲಿಕೆ

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಸಿ.ಎಂ.ಉದಾಸಿ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಬಿಜೆಪಿ ಪಕ್ಷದ ಅಭ್ಯರ್ಥಿಯಾದ  ಉದಾಸಿ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದ್ದಾರೆ. ನಗರದ ಮೂರುಸಾವಿರ ಮಠದಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿ ಚುನಾವಣಾ ಅಧಿಕಾರಿ  ಡಾ.ಸದಾಶಿವ್  ಅವರಿಗೆ ನಾಮಪತ್ರ ಸಲ್ಲಿಸಿದರು. ಸಿ.ಎಂ. ಉದಾಸಿಯವರಿಗೆ ಮಗ ಹಾವೇರಿ ಲೋಕಸಭಾ ಸದಸ್ಯ ಶಿವಕುಮಾರ್ ಉದಾಸಿ ಸಾಥ್ ನೀಡಿದರು.

Leave a Reply

Your email address will not be published. Required fields are marked *