ಸಮ್ಮಿಶ್ರ ಸರ್ಕಾರದಲ್ಲಿ ಮೂಡುತ್ತಾ ‘ಸಮನ್ವಯ’..?! ಇಂದು ಪ್ರಥಮ ಸಭೆ..!

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಸಮನ್ವಯ ಸಮಿತಿ ಸಭೆ ಇಂದು ನಡೆಯಲಿದೆ. ಈ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಭೆ ಏರ್ಪಾಡಾಗಿದೆ. ಈ ವೇಳೆ ಸಮ್ಮಿಶ್ರ ಸರ್ಕಾರದ ಯೋಜನೆಗಳು, ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.

ಎರಡೂ ಪಕ್ಷಗಳ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಬಗ್ಗೆ ಮತ್ತು ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯಲು ಬೇಕಾದ ಅಗತ್ಯ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಎಲ್ಲಕ್ಕಿಂತ ಹೆಚ್ಚಾಗಿ ಈಗಾಗಲೇ ಸಮ್ಮಿಶ್ರ ಸರ್ಕಾರದಲ್ಲಿ ಶುರುವಾಗಿರುವ ಅಸಮಾಧಾನಗಳಿಗೆ ಪರಿಹಾರ ಹುಡುಕುವ ಕುರಿತೂ ಚರ್ಚೆ ನಡೆಯಲಿದೆ.  ಇನ್ನು ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್, ಡಿಸಿಎಂ ಪರಮೇಶ್ವರ್ ಹಾಗೂ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಆಲಿ ಭಾಗಿಯಾಗಲಿದ್ದಾರೆ. ಜಿಲ್ಲಾ ಉಸ್ತುವಾರಿಗಳ ನೇಮಕ, ಬಜೆಟ್, ರೈತರ ಸಾಲಮನ್ನ, ಮುಂದಿನ ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳ ಹಂಚಿಕೆ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv