ಲಾರಿ-ಸ್ಕೂಟರ್​ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ರಾಯಚೂರು: ಲಾರಿ ಮತ್ತು ಸ್ಕೂಟರ್​​ ನಡುವೆ ಡಿಕ್ಕಿಯಾದ ಪರಿಣಾಮ, ಸ್ಕೂಟರ್‌ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಸಂತೆಕೇಲ್ಲೂರು ಗ್ರಾಮದ ಬಳಿ ನಡೆದಿದೆ. ಗಾಯಾಳುಗಳು ಹಟ್ಟಿ ಗ್ರಾಮದ ಶರತಚಂದ್ರ ಮತ್ತು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಅಪಘಾತ ಬಳಿಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸದ್ಯ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಬಾಗಕೋಟೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.