‘ಕಾಂಗ್ರೆಸ್​​​ಗೆ ಲಿಂಗಾಯತರು ಮತ ನೀಡಿದ್ರೆ ಅಪರಾಧ’ ಹೇಳಿಕೆ, ಬಿಎಸ್​ವೈ ವಿರುದ್ಧ ದೂರು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ರಾಜ್ಯ ಕಾಂಗ್ರೆಸ್​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮಾಜಿ ಮುಖ್ಯಮಂತ್ರಿ ‘ವೀರೇಂದ್ರ ಪಾಟೀಲರಿಗೆ ಅವಮಾನಿಸಿದ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಮತ ನೀಡಿದರೆ ಅಪರಾಧ ಮಾಡಿದಂತೆ’ ಎಂಬ ಬಿ.ಎಸ್‌ ಯಡಿಯೂರಪ್ಪ ಹೇಳಿಕೆ ಲಿಂಗಾಯತ ಸಮುದಾಯವನ್ನ ಪ್ರಚೋದಿಸುವಂತಿದೆ ಅಂತಾ ಆರೋಪಿಸಿ ಕಾಂಗ್ರೆಸ್​ ನಾಯಕರು ದೂರು ನೀಡಿದ್ದಾರೆ.

ಇದನ್ನೂ ಓದಿ: ವೀರಶೈವ-ಲಿಂಗಾಯತ ಸಮಾಜದವರು ಕಾಂಗ್ರೆಸ್​ಗೆ ಒಂದು ಮತವನ್ನೂ ಹಾಕುವ ಅಪರಾಧ ಮಾಡಬೇಡಿ: ಬಿಎಸ್​ವೈ

ಕೆಪಿಸಿಸಿ ಕಾರ್ಯದರ್ಶಿ ಎ.ಎನ್.ನಟರಾಜ್​ಗೌಡ, ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಅದ್ದೆ, ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರರಾವ್, ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ದೂರಿನಲ್ಲಿ, ಇದೊಂದು ಸಂವಿಧಾನ ವಿರೋಧಿ ನಿಲುವಾಗಿದೆ. ಈ ಹೇಳಿಕೆ ಮೂಲಕ ಬಿ.ಎಸ್.ಯಡಿಯೂರಪ್ಪ​ ಸುಪ್ರೀಂಕೋರ್ಟ್ ತೀರ್ಪನ್ನ ಉಲ್ಲಂಘಿಸಿದಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಅಂತಾ ಉಲ್ಲೇಖಿಸಿದ್ದಾರೆ.

 


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv