ಸಿಎಂ ಕುಮಾರಸ್ವಾಮಿ ವಿರುದ್ಧ ಚುನಾವಣಾಧಿಕಾರಿಗೆ ದೂರು

ಮಂಡ್ಯ: ಮಾಧ್ಯಮಗಳ ಮೇಲೆ ಜೆಡಿಎಸ್ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿ, ಸಿಎಂ  ಕುಮಾರಸ್ವಾಮಿ ವಿರುದ್ಧ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಡ್ಯ ಜಿಲ್ಲಾ ಘಟಕ  ಚುನಾವಣಾಧಿಕಾರಿಗೆ ದೂರು ನೀಡಿದೆ. ನಿನ್ನೆ ಶ್ರೀರಂಗಪಟ್ಟಣ, KRSನಲ್ಲಿ ಮಾಧ್ಯಮ ಪ್ರತಿನಿಧಿಗಳು, ವಾಹನಗಳ ಮೇಲೆ ಹಲ್ಲೆ ಸೇರಿದಂತೆ ಕೆ.ಆರ್.ಎಸ್. ನಲ್ಲಿ ಸಿಎಂ ಹೆಚ್​ಡಿಕೆ ಪ್ರಚೋದಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ವೇಳೆ ಸಿಎಂ ಹೇಳಿಕೆ ಹಾಗೂ  ಕೆಲ ಜೆಡಿಎಸ್ ಕಾರ್ಯಕರ್ತರ ಗೂಂಡಾ ವರ್ತನೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಆಗ್ರಹಿಸಿ, ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದೇ ವೇಳೆ  ಮಾಧ್ಯಮಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಮನವಿ ಮಾಡಲಾಗಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv