ನನಗೆ ಜೆಡಿಎಸ್ ಸೇರಿದಂತೆ ಎಲ್ಲಾ ಸಂಘಟನೆಗಳು ಬೆಂಬಲ ನೀಡ್ತಾರೆ: ಹೆಚ್.ಬಿ.ಮಂಜಪ್ಪ

ದಾವಣಗೆರೆ: ಬಿಜೆಪಿ ಅವರು ಹಣ ಬಲದ ಮೇಲೆ‌ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಆದ್ರೆ ನಾವು ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಜನರ ಬಳಿ ಹೋಗುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಬಿ. ಮಂಜಪ್ಪ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಹೆಚ್.ಬಿ. ಮಂಜಪ್ಪ, ನನಗೆ ಜೆಡಿಎಸ್ ಸೇರಿದಂತೆ ಎಲ್ಲಾ ಸಂಘಟನೆಗಳು ಬೆಂಬಲ ನೀಡುತ್ತಾರೆ. ನಾನು ಜಿಲ್ಲಾ ಪಂಚಾಯತ್​​, ತಾಲೂಕು ಪಂಚಾಯತ್ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಈ ಬಾರಿಯೂ ನಾನು ಗೆದ್ದು ಬರುವ ವಿಶ್ವಾಸವಿದೆ ಎಂದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv