‘ಕೈ’ ಬೆಂಬಲದ ನಿರೀಕ್ಷೆಯಲ್ಲಿದ್ದ ‘ಲೋಕ’ ಅಭ್ಯರ್ಥಿ ಪ್ರಕಾಶ್​ ರಾಜ್​ಗೆ ನಿರಾಸೆ

ಬೆಂಗಳೂರು: ಕಾಂಗ್ರೆಸ್ ಬೆಂಬಲದ ನಿರೀಕ್ಷೆಯಲ್ಲಿದ್ದ ನಟ ಪ್ರಕಾಶ್ ರಾಜ್​ಗೆ ತೀವ್ರ ನಿರಾಸೆಯಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಕಾಶ್​ ರಾಜ್ ಬೆಂಗಳೂರು ಸೆಂಟ್ರಲ್​ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಈ ಸಂಬಂಧ ಭರ್ಜರಿ ತಯಾರಿಯನ್ನೂ ನಡೆಸಿದ್ದಾರೆ. ಚುನಾವಣೆಯಲ್ಲಿ ತನ್ನನ್ನು ಬೆಂಬಲಿಸುವಂತೆ ಪ್ರಕಾಶ್​ ರಾಜ್​ ಕಾಂಗ್ರೆಸ್​ ಮೊರೆ ಹೋಗಿದ್ರು. ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷರ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ್ರು. ಆದ್ರೆ ಪ್ರಕಾಶ್​ ರಾಜ್​ಗೆ ಬೆಂಬಲ ನೀಡದಿರಲು ಕಾಂಗ್ರೆಸ್ ತೀರ್ಮಾನಿಸಿದೆಯಂತೆ.

ಈಗಾಗಲೇ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಜೆಡಿಎಸ್​ ಜೊತೆಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲು ಹೈಕಮಾಂಡ್,​ ರಾಜ್ಯ ನಾಯಕರಿಗೆ ಸೂಚಿಸಿದೆ. ಹೀಗಿರುವಾಗ ಯಾವ ಕಾರಣಕ್ಕೂ ಪಕ್ಷೇತರ ಅಭ್ಯರ್ಥಿಯನ್ನ ಬೆಂಬಲಿಸಲು ಸಾಧ್ಯವಿಲ್ಲ. ಅಲ್ಲದೇ ಈ ಬಗ್ಗೆ ಈಗಾಗಲೇ ಹೈಕಮಾಂಡ್ ಸ್ಪಷ್ಟ ಸೂಚನೆಯನ್ನೂ ಕೊಟ್ಟಿದೆ ಎಂದು ಹೇಳಿರುವ ದಿನೇಶ್ ಗುಂಡೂರಾವ್, ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎನ್ನಲಾಗಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv