ಕಾಂಗ್ರೆಸ್​ ಸರ್ಕಾರ ಹಿಂದೂ ವಿರೋಧಿ: ಯೋಗಿ ಆದಿತ್ಯನಾಥ್​

ಹಾವೇರಿ: ಸಿದ್ದರಾಮಯ್ಯ ಸರ್ಕಾರ ಹಲವು ಯೋಜನೆಗಳಲ್ಲಿ ಭ್ರಷ್ಟಾಚಾರ ಮಾಡಿದೆ. ಉತ್ತರ ಪ್ರದೇಶದಲ್ಲಿ ರೈತರ ಸಾಲವನ್ನು ಒಂದು ಲಕ್ಷದವರೆಗೆ ಮನ್ನಾ ಮಾಡಿದ್ದೇನೆ. ಆದ್ರೆ ಸಿದ್ದರಾಮಯ್ಯ ಸರ್ಕಾರ ಏನು ಮಾಡಿದೆ? ರಾಜ್ಯದಲ್ಲಿ ಕಾಂಗ್ರೆಸ್​ ರೈತರನ್ನು ಕಡೆಗಣಿಸಿದೆ. ಅಲ್ಲದೇ ಮರಳು ದಂಧೆಗೆ ಕಾಂಗ್ರೆಸ್​ ರಕ್ಷಣೆ ನೀಡುತ್ತಿದೆ ಎಂದು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್​ ಆರೋಪಿಸಿದರು.
ಹಾವೇರಿಯ ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಕೆಲಗಾರ್ ಪರ ಪ್ರಚಾರದಲ್ಲಿ ಮಾತನಾಡಿದ ಅವರು, ರೈತರನ್ನು ಕಾಪಾಡಲು ಕೇಂದ್ರ ಸರ್ಕಾರ ಫಸಲ್​ ವಿಮೆ ಯೋಜನೆ ಸೇರಿದಂತೆ ಅನೇಕ ಯೋಜನೆ ಜಾರಿಗೆ ತಂದಿದೆ. ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ ಸರ್ಕಾರ, ಹಿಂದೂ ವಿರೋಧಿ ಸರ್ಕಾರ ಆಗಿದೆ. ಈ ಸರ್ಕಾರವನ್ನು ಕಿತ್ತೊಗೆಯಲು ಮುಂದಿನ ಸಿಎಂ ಯಡಿಯೂರಪ್ಪರನ್ನು ಮಾಡಲು ಬಿಜೆಪಿ ಬೆಂಬಲಿಸಿ ಎಂದು ಮನವಿಯನ್ನು ಮಾಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv