‘ಮಾನಸಿಕವಾಗಿ ಹೊಂದಾಣಿಕೆಯಾಗಿಲ್ಲ ಹಾಗಾಗಿ.. ಗಲಾಟೆಗಳು.. ಅಷ್ಟೇ!’

ತುಮಕೂರು: ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಹಣಾಹಣಿ ಇತ್ತು. ಆದರೆ, ಈಗ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸಬೇಕಾದ ಅನಿವಾರ್ಯತೆ ಬಂದಿದೆ. ಜಿಲ್ಲೆಯಲ್ಲಿ ಮಾನಸಿಕವಾಗಿ ಎರಡೂ ಪಕ್ಷಗಳು ಇನ್ನೂ ಹೊಂದಾಣಿಕೆ ಆಗಿಲ್ಲ ಅಂತಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆಂಚರಾಮಯ್ಯ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್, ಜೆಡಿಎಸ್​ ಪಕ್ಷಗಳು ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮಾಡಿಕೊಂಡಿರುವ ಮೈತ್ರಿ ಇದಾಗಿದ್ದರೂ, ಚುನಾವಣೆಯಲ್ಲಿ ಜೆಡಿಎಸ್ ವಿರುದ್ಧವೇ ನಾವು ಕೆಲಸ ಮಾಡಿದ್ದೆವು. ಈಗ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದರಿಂದ ಕಾರ್ಯಕರ್ತರಲ್ಲಿ ಅಸಮಾಧಾನವಿದೆ. ಹೀಗಾಗಿ ಕಾಂಗ್ರೆಸ್- ಜೆಡಿಎಸ್ ಪಕ್ಷಗಳ ಕಾರ್ಯಕರ್ತರ ನಡುವೆ ಆಗಾಗ್ಗೆ ಗಲಾಟೆಗಳು ಆಗುತ್ತಿವೆ. ಏನೇ ಆದರೂ ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರಬೇಕು ಅಂತಾನೂ ಕೆಂಚಮಾರಯ್ಯ ಹೇಳಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv