ಕುತೂಹಲ ಕೆರಳಿಸಿದ ಇಂದಿನ ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು: ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಬೆಳಗ್ಗೆ 9 ಗಂಟೆಗೆ, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ನಡೆಯುತ್ತಿರುವ ಸಭೆ ಇದಾಗಿದೆ.

ಸಭೆಯಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್​​ನಲ್ಲಿ ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ಅಲ್ಪಸಂಖ್ಯಾತರಿಗೆ  ತಾರತಮ್ಯ ಮಾಡಿರುವ ಆರೋಪ ಹಾಗೂ ಸಚಿವರಿಗೆ ಇಲಾಖಾವಾರು ಕೊಟ್ಟಿರುವ ಅನುದಾನ, ಕೈ ಶಾಸಕರ ಕ್ಷೇತ್ರದಲ್ಲಿನ ಕಾಮಗಾರಿಗಳು, ಅಧಿಕಾರಿಗಳ ವರ್ಗಾವಣೆಯ ಕುರಿತು ಚರ್ಚೆ ನಡೆಯಲಿದೆ.

ಪ್ರಮುಖವಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ಯಾವ ಜಿಲ್ಲೆಗಳನ್ನು ತಾವು ಇಟ್ಟುಕೊಳ್ಳಬೇಕು, ಯಾವ ಜಿಲ್ಲೆಗಳನ್ನು ಜೆಡಿಎಸ್​​​ಗೆ ಬಿಟ್ಟು ಕೊಡಬೇಕು ಅನ್ನೋದರ ಬಗ್ಗೆ ಇಂದು ತೀರ್ಮಾನ ಕೈಗೊಳ್ಳಲಾಗುತ್ತದೆ.

ಇನ್ನು ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ವಂಚಿತ ಕೆಲ ಶಾಸಕರು ಅಸಮಧಾನಗೊಂಡಿದ್ದು, ಮತ್ತೆ ಸಚಿವ ಸಂಪುಟ ವಿಸ್ತರಿಸಿ ಅವರಿಗೆ ಸ್ಥಾನ ಕೊಡುವುದು ಹಾಗೂ ಉಳಿದವರಿಗೆ ನಿಗಮ ಮಂಡಳಿ ಸ್ಥಾನ ಕೊಡವುದರ ಬಗ್ಗೆ ಚರ್ಚೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದಿನ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮಹತ್ವ ಪಡೆದುಕೊಂಡಿದೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv