ಮೈತ್ರಿ ಭದ್ರಗೊಳಿಸಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್​..!

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಎದುರಾಗಿರುವ ಆಪರೇಷನ್​ ಕಮಲ ಸಂಕಷ್ಟವನ್ನ ದೂರ ಮಾಡಲು ಸರ್ಕಾರ ಮಾಸ್ಟರ್ ಪ್ಲಾನ್ ಮಾಡ್ತಿದೆ. ಅತೃಪ್ತ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮೈತ್ರಿ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸ್ತಿದೆ. ಈ ಹಿನ್ನೆಲೆ ಇಂದು ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್​ ಆಗಮಿಸುತ್ತಿದ್ದಾರೆ. ನಾಳೆ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಸಭೆಗೂ ಮೊದಲು ರಾಜ್ಯ ಕಾಂಗ್ರೆಸ್​ ನಾಯಕರ ಜೊತೆ ವೇಣುಗೋಪಾಲ್​ ಮಾತುಕತೆ ನಡೆಸಲಿದ್ದಾರೆ. ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ, ಲೋಕಸಭಾ ಚುನಾವಣೆಯಲ್ಲಿ ಆಗಿರುವ ಡ್ಯಾಮೇಜ್ ಕಂಟ್ರೋಲ್ ಬಗ್ಗೆ ಚರ್ಚೆ ನಡೆಯಲಿದೆ. ಸಿದ್ದರಾಮಯ್ಯ, ಡಾ‌.ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸೇರಿದಂತೆ ಹಲವು ನಾಯಕರ ಜೊತೆಗೆ ಕೆ.ಸಿ. ವೇಣುಗೋಪಾಲ್ ಚರ್ಚೆ ನಡೆಸಲಿದ್ದಾರೆ ಎನ್ನಲಾಗ್ತಿದೆ. ಸಭೆಯಲ್ಲಿ ಒಮ್ಮತದ ನಿರ್ಧಾರ ಬಂದ್ರೆ, ಸಚಿವ ಸಂಪುಟ ಪುನಾರಚನೆಗೆ ಮುಂದಾಗಲಿದ್ದಾರೆ ಎನ್ನಲಾಗಿದೆ. ಅಲ್ಲದೆ ಸಂಪುಟದಲ್ಲಿ  ಕೆಲ ಹಾಲಿ ಸಚಿವರನ್ನು ಹೊರಗಿಟ್ಟು, ಅತೃಪ್ತರಿಗೆ ಮಣೆ ಹಾಕಲು ಕಾಂಗ್ರೆಸ್ ಸಿದ್ಧತೆ ನಡೆಸ್ತಿದೆ ಅಂತಾ ಹೇಳಲಾಗ್ತಿದೆ.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv