‘ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ’ ಕರಡಿ ಸಂಗಣ್ಣ ಹೇಳಿಕೆ

ಕೊಪ್ಪಳ: ಶಾಸಕ ರಮೇಶ ಜಾರಕಿಹೊಳಿ ರಾಜೀನಾಮೆ ಕೊಡಲು ನಿರ್ಧರಿಸಿದ್ದಾರೆ. ಅವರೊಂದಿಗೆ ಹಲವು ಶಾಸಕರು ರಾಜೀನಾಮೆ ಕೊಡಲಿದ್ದಾರೆ ಎಂದು ಸಂಸದ ಕರಡಿ ಸಂಗಣ್ಣ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಸಮಾಧಾನಗೊಂಡ ಶಾಸಕರಲ್ಲಿ ಎಷ್ಟು ಜನ ರಾಜೀನಾಮೆ ಕೊಡುತ್ತಾರೆ ಗೊತ್ತಿಲ್ಲ. ಮೇ 23 ಮತ ಏಣಿಕೆ ನಂತರ ಮೈತ್ರಿ ಸರ್ಕಾರ ಬಿದ್ದು ಹೋಗುತ್ತದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುತ್ತದೆ. ಒಂದು ಮತ ಎರಡು ಸರ್ಕಾರ ಅನ್ನೋದು ನಿಜ. ಕೇಂದ್ರದಲ್ಲಿ ಮೋದಿ ಪ್ರಧಾನಿ ಆಗ್ತಾರೆ. ರಾಜ್ಯದಲ್ಲಿ ಯಡಿಯೂರಪ್ಪ ಸಿಎಂ ಆಗೋದು ಖಚಿತ. ಈಗಾಗಲೇ ಮೈತ್ರಿ ಸರ್ಕಾರದಲ್ಲಿ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಮೈತ್ರಿ ಸರ್ಕಾರ ಹಾಗೂ ಸಿಎಂ ಕೆಲವು ಜಿಲ್ಲೆಗಳಿಗೆ ಸೀಮಿತವಾಗಿದ್ದಾರೆ. ಶಾಸಕರು, ಸಚಿವರು ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಅಂತ ಬೇಸತ್ತಿದ್ದಾರೆ. ಸರ್ಕಾರದಿಂದ ಹೊರಬರಲು ನಿರ್ಧರಿಸಿದ್ದಾರೆ ಎಂದು ಕರಡಿ ಸಂಗಣ್ಣ ಹೇಳಿದರು.


Follow us on:  

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv