ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ

ಯಾದಗಿರಿ: ಜೆಡಿಎಸ್​​ ಹಾಗೂ ಕಾಂಗ್ರೆಸ್​​​ ಪಕ್ಷಗಳಿಗೆ ಸರ್ಕಾರ ರಚನೆಗೆ ಅವಕಾಶ ನೀಡದ ರಾಜ್ಯಪಾಲರ ನಡೆಯನ್ನ ಖಂಡಿಸಿ ಕಾಂಗ್ರೆಸ್​ ಕಾರ್ಯಕರ್ತರು ನಗರದ ಶಾಸ್ತ್ರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಕಾಂಗ್ರೆಸ್​ ಮತ್ತು ಜೆಡಿಎಸ್​ಗೆ ಸರ್ಕಾರ ರಚನೆಗೆ ಅವಕಾಶ ಕೊಡಬೇಕೆಂದು ಒತ್ತಾಯ ಮಾಡಿದ್ರು. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv