ಆಪರೇಷನ್ ಕಮಲ ಖಂಡಿಸಿ ರಾಜ್ಯದೆಲ್ಲೆಡೆ ಪ್ರೊಟೆಸ್ಟ್..!

ಬೆಂಗಳೂರು: ಆಪರೇಷನ್ ಕಮಲ ವಿರೋಧಿಸಿ ಕಾಂಗ್ರೆಸ್​ ಕಾರ್ಯಕರ್ತರು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಿದ್ದಾರೆ. ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಮುಂಭಾಗ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ನಾಯಕರ‌ ವ್ಯಂಗ್ಯ ಭಾವಚಿತ್ರ ಹಿಡಿದ ನೂರಾರು ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ರು. ಪ್ರತಿಭಟನೆಯಲ್ಲಿ ಶಾಸಕ ರಾಮಲಿಂಗಾ ರೆಡ್ಡಿ, ಶಾಸಕಿ ಸೌಮ್ಯರೆಡ್ಡಿ ಸೇರಿದಂತೆ ಹಲವರು ಭಾಗಿಯಾಗಿದ್ರು.

ಬಳ್ಳಾರಿ:
ಆಪರೇಶನ್ ಕಮಲದ ಮೂಲಕ ಬಿಜೆಪಿ ನಾಯಕರು ಶಾಸಕರ ಖರೀದಿಗೆ ಮುಂದಾಗಿದ್ದಾರೆ ಎಂದು ಆರೋಪಿಸಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ‌ ನಡೆಸಿದ್ರು. ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮೋದಿಯ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ಹೊರಹಾಕಿದರು‌. ಇದು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ‌ ಅಂತಾ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ರು.

ಶಿವಮೊಗ್ಗ:
ಶಿವಮೊಗ್ಗದಲ್ಲೂ ಆಪರೇಷನ್ ಕಮಲ ಖಂಡಿಸಿ ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ರು. ಯಡಿಯೂರಪ್ಪ ಪ್ರತಿಕೃತಿ ದಹನ ಮಾಡಿ, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಕಲಬುರ್ಗಿ:
ನಗರದಲ್ಲೂ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಪರೇಷನ್ ಕಮಲ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ನಗರದ ಅನ್ನಪೂರ್ಣ ಕ್ರಾಸ್‌ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ್ ಕಾಳಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಆಪರೇಷನ್ ಕಮಲ ಮಾಡುತ್ತಿರುವ ಭ್ರಷ್ಟ ಬಿಜೆಪಿ ನಾಯಕರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಪ್ರಧಾನಿ ಮೋದಿ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.

ರಾಯಚೂರು:
ಇಲ್ಲಿ ಬಿಜೆಪಿ ಆಪರೇಷನ್ ಕಮಲ ಖಂಡಿಸಿ ರಾಯಚೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಬಿಎಸ್ ಯಡಿಯೂರಪ್ಪ ವಿರುದ್ದ ಧಿಕ್ಕಾರ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು.

ಬೀದರ್:
ಆಪರೇಶನ್ ಕಮಲ ಆಡಿಯೋ ರಿಲೀಸ್ ಆದ ಹಿನ್ನಲೆ ಬೀದರ್ ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಾಬಶೆಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಬಿಎಸ್ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ರು. ಎರಡು ಮೂರು ಬಾರಿ ಆಪರೇಶನ್ ಕಮಲ ಮಾಡಲು ಮುಂದಾಗಿದ್ರೂ ಆದರೆ ಅದು ಯಶಸ್ವಿ ಆಗಲಿಲ್ಲ. ಅದು ಮುಂದೆ ಕೂಡ ಆಗೋದಿಲ್ಲ. ನಮ್ಮ ಸರ್ಕಾರ 5 ವರ್ಷ ಸುಭದ್ರವಾಗಿ ಆಡಳಿತ ನಡೆಸುತ್ತೆ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.

ಯಾದಗಿರಿ:
ಆಪರೇಷನ್ ಕಮಲ ಖಂಡಿಸಿ ಯಾದಗಿರಿಯಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಶಾಸ್ತ್ರೀ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಘವೇಂದ್ರ ಮನಸ್ಗಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಆಪರೇಷನ್ ಕಮಲ ಮಾಡುತ್ತಿರುವ ಭ್ರಷ್ಟ ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ರು.

ಕೊಪ್ಪಳ:

ಆಪರೇಷನ್ ಕಮಲ ಖಂಡಿಸಿ ಕೊಪ್ಪಳದಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ನಗರದ ಆಶೋಕವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರ್ಕಾರ ಬೀಳಿಸಲು ಬಿಜೆಪಿ ನಾಯಕರು ಕೆಳಮಟ್ಟಕ್ಕೆ ಇಳಿಯುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ರು. ಯಡಿಯೂರಪ್ಪ ವಿರುದ್ಧ ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ರು.

 

 


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv