ಬಿ.ಸಿ. ಪಾಟೀಲ್​ಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್​ ಕಾರ್ಯಕರ್ತರ ಒತ್ತಾಯ

ಹಾವೇರಿ: ಜಿಲ್ಲೆಯ ಏಕೈಕ ಕಾಂಗ್ರೆಸ್​ ಶಾಸಕ ಬಿ.ಸಿ. ಪಾಟೀಲ್​ಗೆ ಸಚಿವ ಸ್ಥಾನದ ಜೊತೆಗೆ ಜಿಲ್ಲಾ ಉಸ್ತುವಾರಿ ಸ್ಥಾನವನ್ನು ನೀಡಬೇಕೆಂದು ಕಾಂಗ್ರೆಸ್​ ಕಾರ್ಯಕರ್ತರು ಹೈಕಮಾಂಡ್​ಗೆ ಒತ್ತಾಯಿಸಿದ್ದಾರೆ.
ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಬಸವರಾಜ್​ ಶಿವಣ್ಣವರ್​, ಕಾಂಗ್ರೆಸ್​ನಿಂದ ಏಕೈಕ ಶಾಸಕ ಆಯ್ಕೆ ಆಗಿದ್ದಾರೆ. ಹೀಗಾಗಿ ಪಕ್ಷ ಬಲಪಡಿಸಲು ಮತ್ತು ಜಿಲ್ಲಾ ಅಭಿವೃದ್ಧಿಗೆ ಬಿ.ಸಿ. ಪಾಟೀಲ್​ಗೆ ಸಚಿವ ಸ್ಥಾನ ನೀಡಬೇಕು. ಒಂದು ವೇಳೆ ಅವರಿಗೆ ಸಚಿವ ಸ್ಥಾನ ಮತ್ತು ಜಿಲ್ಲಾ ಉಸ್ತುವಾರಿ ಸ್ಥಾನವನ್ನು ನೀಡದಿದ್ದರೇ ನಾವೆಲ್ಲ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು. ಇನ್ನು ಕೆಪಿಜೆಪಿ ಶಾಸಕ ಆರ್​​. ಶಂಕರ್​ಗೆ ಸಚಿವ ಸ್ಥಾನ ನೀಡುವ ಬಗ್ಗೆ ನಮ್ಮ ವಿರೋಧವಿಲ್ಲ. ನಮ್ಮ ಪಕ್ಷದ ಏಕೈಕ ಶಾಸಕ ಬಿ.ಸಿ. ಪಾಟೀಲ್​ಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್​ ಕಾರ್ಯಕರ್ತರು ಹೈಕಮಾಂಡ್​ಗೆ ಒತ್ತಾಯಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv