ವಾಣಿಜ್ಯ ನಗರಿಗೆ ಪ್ರಧಾನಿ ಆಗಮನ ವಿರೋಧಿಸಿ ಪ್ರತಿಭಟನೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರು ನಗರಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಸಕ ಅಬ್ಬಯ್ಯ ಪ್ರಸಾದ್​​ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಮಾಡುತ್ತಿದ್ದಾರೆ.

ಕೇಂದ್ರದಲ್ಲಿ ಅಧಿಕಾರ ದುರುಪಯೋಗವಾಗಿದೆ ಎಂದು ಕಾರ್ಯಕರ್ತರು ಆರೋಪಿಸಿ, ಆಪರೇಷನ್ ಕಮಲ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆಪರೇಷನ್ ಕಮಲದಲ್ಲಿ ಬಿ.ಎಸ್. ಯಡಿಯೂರಪ್ಪ ನೇರವಾಗಿ ಭಾಗಿಯಾಗಿದ್ದಾರೆ. ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಪ್ರತಿಭಟನಾ ಮೆರವಣಿಗೆ ಮೂಲಕ ಚೆನ್ನಮ್ಮ ವೃತ್ತದತ್ತ ಪ್ರಯಾಣ ಬೆಳೆಸಿದ್ದರು. ಪೊಲೀಸರು ಮಾರ್ಗ ಮಧ್ಯದಲ್ಲಿಯೇ ಕಾರ್ಯಕರ್ತರನ್ನು ತಡೆದರು. ಹೀಗಾಗಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ ನಡೆಯಿತು. ಪೊಲೀಸರು ದಾರಿ ಮಧ್ಯದಲ್ಲಿಯೇ ನೂರಕ್ಕೂ ಹೆಚ್ಚು‌ ಪ್ರತಿಭಟನಾಕಾರರನ್ನ ಬಂಧಿಸಿದ್ದಾರೆ.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv