ಕೆಎಸ್‍ಆರ್​ಟಿಸಿ ಬಸ್‍ಗೆ ಕಂಟೇನರ್ ಡಿಕ್ಕಿ

ಕೊಡಗು: ಕೆಎಸ್‍ಆರ್​ಟಿಸಿ ಬಸ್‍ಗೆ ಕಂಟೇನರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮಧ್ಯೆಯೇ ಕಂಟೇನರ್ ಮಗುಚಿಕೊಂಡ ಘಟನೆ, ಮೈಸೂರು-ಮಡಿಕೇರಿ ಹೆದ್ದಾರಿಯ ಬೋಯಿಕೇರಿಯಲ್ಲಿ ನಡೆದಿದೆ. ಅದೃಷ್ಟವಶಾತ್​ ಬಸ್‍ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿಂದ ಮಡಿಕೇರಿಗೆ ಬರುತ್ತಿದ್ದ ಬಸ್‍ಗೆ ಕಂಟೇನರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನ ತೆರವಿಗೆ ಕ್ರಮ ಕೈಗೊಂಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv