ಕಂಟೇನರ್‌ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ನೆಲಮಂಗಲ: ಬೊಲೇರೋ ವಾಹನ ಹಾಗೂ ಕಂಟೇನರ್‌ ಲಾರಿ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೇಗೂರಿನ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ನಡೆದಿದೆ. ಬೊಲೇರೋದಲ್ಲಿದ್ದ ತುಮಕೂರು ಮೂಲದ ಕೆಂಪರಾಜು(34) ಮತ್ತು ರಾಕೇಶ್‌(28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಯಮನಾಗಿ ಬಂದ ಕಂಟೇನರ್ ಲಾರಿ..!

ಮೃತರಿಬ್ಬರು ತುಮಕೂರಿನಿಂದ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ನಾಗಲ್ಯಾಂಡ್‌ ಮೂಲದ ಕಂಟೇನರ್‌ ಲಾರಿ ಇವರಿದ್ದ ಬೊಲೇರೋ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಬೊಲೇರೋ ವಾಹನ, ಮುಂದೆ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಖಾಸಗಿ ಬಸ್ ಹಾಗೂ ಕಂಟೆನರ್ ಮಧ್ಯೆ ಸಿಲುಕಿ, ಬೊಲೇರೋ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕೆಲಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Leave a Reply

Your email address will not be published. Required fields are marked *