ಕಲುಷಿತ ನೀರು ಸೇವನೆ, 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚಿಕ್ಕಮಗಳೂರು: ಕಲುಷಿತ ನೀರು ಸೇವಿಸಿ 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಸಾದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆಯಿಂದ ಗ್ರಾಮದ 20 ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಲಳುತ್ತಿದ್ದರು. ಕುಡಿಯುವ ನೀರಿನ ಪೈಪ್ ಒಡೆದು ಕೊಳಚೆ ನೀರು ಸರಬರಾಜಾಗಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಇನ್ನು, ಅಸ್ವಸ್ಥಗೊಂಡಿರುವವರು ಚಿಕ್ಕಮಗಳೂರು ಮತ್ತು ಹಾಸನ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮಂಜುನಾಥ್ ಹಾಗೂ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮದಲ್ಲಿ ಅಸ್ವಸ್ಥಗೊಂಡಿರುವ ರೋಗಿಗಳ ರಕ್ತದ ಮಾದರಿ ಸಂಗ್ರಹ ಮಾಡಿದ್ದು, ಕುಡಿಯೋ ನೀರಿನಿಂದ ಸಾಂಕ್ರಾಮಿಕ ರೋಗ ಹರಡಿರೋ ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಶಾಸಕ ಸಿ.ಟಿ.ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv