ಕೌಂಟಿಂಗ್​ಗೆ ಯಾದಗಿರಿಯಲ್ಲಿ ಸಕಲ ಸಿದ್ಧತೆ

ಯಾದಗಿರಿ: ನಗರದ ಸರ್ಕಾರಿ ಪದವಿ ಕಾಲೇಜ್​ನಲ್ಲಿ ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಈ ಸಂಬಂಧ ಎಣಿಕೆ ಕೇಂದ್ರದ ಸುತ್ತ 144 ಸೆಕ್ಷನ್​ ಜಾರಿಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಸಮೀಪ ಯಾವುದೇ ಸಭೆ, ಸಮಾರಂಭ, ವಿಜಯೋತ್ಸವ ಆಚರಿಸುವಂತಿಲ್ಲ ಎಂದು ಸೂಚಿಸಲಾಗಿದೆ. ಇನ್ನು 100 ಕ್ಕೂ ಹೆಚ್ಚು ಸಿಬ್ಬಂದಿ ಮತ ಎಣಿಕೆ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟು ಎಂಟು ಕೊಠಡಿಗಳಲ್ಲಿ ಮತ ಎಣಿಕೆ ನಡೆಯಲಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv