ಆಯಾತಪ್ಪಿ ಚರಂಡಿಗೆ ಬಿದ್ದ ಗೋವಿನ ರಕ್ಷಣೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿ, ಹಳ್ಳ.ಕೊಳ್ಳ. ಚರಂಡಿಗಳು ತುಂಬಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ಚರಂಡಿಗೆ ಆಯಾತಪ್ಪಿ ಬಿದ್ದ ಗೋವನ್ನು ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರು ರಕ್ಷಣೆ ಮಾಡಿದ್ದಾರೆ. ಚಿಕ್ಕಮಗಳೂರಿನ ಮೂಡಗೇರಿ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಗೋವನ್ನು ರಕ್ಷಿಸಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv