ರಾಮನಗರ ಉಪಚುನಾವಣೆ: ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಅಭ್ಯರ್ಥಿ?

ರಾಮನಗರ: ಉಪ-ಚುನಾವಣೆಗೆ ಬಿಜೆಪಿ ಅಭ್ಯರ್ಥಿಯ ಹೆಸರು ಬಹುತೇಕ ಅಂತಿಮವಾಗಿದೆ. ಮಾಜಿ ಸಚಿವ ಮತ್ತು ಚನ್ನಪಟ್ಟಣ ಕ್ಷೇತ್ರದ ಪರಾಜಿತ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರನ್ನು ರಾಮನಗರ ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿಸಲು ಬಿಜೆಪಿ ನಿರ್ಧಾರ ಮಾಡಿದೆ.
ರಾಮನಗರ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್​​​​ರನ್ನು ಅಭ್ಯರ್ಥಿಯನ್ನಾಗಿ ಮಾಡೋಣ. ಗೆದ್ದರೆ ಕ್ಷೇತ್ರ ನಮ್ಮದಾಗುತ್ತೆ. ಒಂದು ವೇಳೆ ರಾಮನಗರದಲ್ಲಿ ಸೋತರೆ, ಸಿ.ಪಿ.ಯೋಗೇಶ್ವರ್​​ಗೆ ವಿಧಾನಪರಿಷತ್ ಸದಸ್ಯತ್ವ ನೀಡೋಣ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಪ್ರಾಬಲ್ಯ ಹೆಚ್ಚಿದೆ. ಹೀಗಾಗಿ ಸಿ.ಪಿ.ಯೋಗೇಶ್ವರ್ ಅವರನ್ನು ಕಳೆದುಕೊಳ್ಳುವುದು ಬೇಡ. ಹಳೇ ಮೈಸೂರು ಭಾಗದಲ್ಲಿ ಸಿ.ಪಿ.ಯೋಗೇಶ್ವರ್ ಅಗತ್ಯವಿರುವ ವ್ಯಕ್ತಿ. ಹೀಗಿರುವಾಗ ಉಪಚುನಾವಣೆಗೆ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸೋಣ ಎಂದು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಯೋಗೇಶ್ವರ್​ ಪರಾಭವಗೊಂಡರೆ, ವಿ.ಸೋಮಣ್ಣ ಹಾಗೂ ಕೆ.ಎಸ್.ಈಶ್ವರಪ್ಪರಿಂದ ತೆರವಾಗಿರುವ ಎರಡು ಪರಿಷತ್ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್​​ಗೆ ಆವಕಾಶ ನೀಡೋಣ ಎಂಬ ತೀರ್ಮಾನಕ್ಕೆ ಬಿಜೆಪಿ ನಾಯಕರು ಬಂದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಜೆಡಿಎಸ್​​ನಿಂದ ರಾಮನಗರ ಉಪಚುನಾವಣೆಗೆ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಬಹುತೇಕ ಅಂತಿಮವಾಗಿದೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv