ಬೆಳೆ ಸಾಲಮನ್ನಾ..! ಜೆಡಿಎಸ್​ ಕಾರ್ಯಕರ್ತರ ಸಂಭ್ರಮಾಚರಣೆ

ಕಲಬುರ್ಗಿ: ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನಲ್ಲಿ ರೈತರ ₹ 2 ಲಕ್ಷವರೆಗಿನ ಬೆಳೆ ಸಾಲ ಮನ್ನಾ ಘೋಷಣೆ ಮಾಡಿದ ಹಿನ್ನೆಲೆ ಜೆಡಿಎಸ್​ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ರೈತರಿಗೆ ಶಾಲು‌ ಹೊದಿಸಿ ಸನ್ಮಾನ ಮಾಡಿದ ಕಾರ್ಯಕರ್ತರು, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಆಚರಣೆಯಲ್ಲಿ ಸ್ಥಳೀಯ ಜೆಡಿಎಸ್ ಮುಖಂಡ ದೇವೇಗೌಡ ತೆಲ್ಲೂರ ಸೇರಿ‌ ಇತರರು ಉಪಸ್ಥಿತರಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv