ಸಾಲಮನ್ನಾ, ಹರ್ಷಗೊಂಡ ಬಳ್ಳಾರಿ ರೈತರು

ಬಳ್ಳಾರಿ: ರಾಜ್ಯ ಸರ್ಕಾರ ರೈತರ ಬೆಳೆ ಸಾಲಮನ್ನಾ ಮಾಡಿದ ಹಿನ್ನೆಲೆಯಲ್ಲಿ ನಗರದಲ್ಲಿ, ರಾಜ್ಯ ರೈತ ಸಂಘ ಹಾಗೂ ಹಸೀರು ಸೇನೆ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಇಂದು ಬಜೆಟ್ ಮಂಡಿಸಿದ ಸಿಎಂ ಕುಮಾರ ಸ್ವಾಮಿ, ರೈತರ ₹ 2 ಲಕ್ಷದವರೆಗಿನ ಸಾಲಮನ್ನಾ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಗರದ ರಾಯಲ್ ವೃತ್ತದಲ್ಲಿ ರೈತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.