ಶಾಸಕ ಶಿವಳ್ಳಿಗೆ ಮಂತ್ರಿ ಸ್ಥಾನಕ್ಕೆ ಒತ್ತಾಯಿಸಿ ಪ್ರೊಟೆಸ್ಟ್

ಧಾರವಾಡ: ಕುಂದಗೋಳ ಕ್ಷೇತ್ರದ ಕಾಂಗ್ರೆಸ್​ ಶಾಸಕ ಸಿ.ಎಸ್​.ಶಿವಳ್ಳಿ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಪ್ರತಿಭಟಿಸಿದರು.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಿವಳ್ಳಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಕಾಂಗ್ರೆಸ್​ ಕಾರ್ಯಕರ್ತರು ಒತ್ತಾಯಿಸಿದ್ರು. ಪ್ರತಿಭಟನೆಯಲ್ಲಿ ಕರ್ನಾಟಕ ಪ್ರದೇಶ ಯುವ ಕುರುಬ ಸಂಘ ಹಾಗೂ ಹಾಲುಮತ ಮಹಾಸಭಾದಿಂದ ಪ್ರತಿಭಟನೆ ನಡೆಸಿ ಕಾಂಗ್ರೆಸ್​ ಹೈಕಮಾಂಡ್​ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv