ಕುಂದಗೋಳ ವಿಧಾನಸಭಾ ಟಿಕೆಟ್ ಶಿವಳ್ಳಿ ಪತ್ನಿ ಕುಸುಮಾಗೇ ನೀಡಿ..!

ಹುಬ್ಬಳ್ಳಿ: ಪೌರಾಡಳಿತ ಸಚಿವ ದಿ. ಸಿ.ಎಸ್‌.ಶಿವಳ್ಳಿ ಅಕಾಲಿಕ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಟಿಕೆಟ್‌ನ್ನು ಶಿವಳ್ಳಿಯವರ ಪತ್ನಿಗೆ ನೀಡಬೇಕು ಎಂದು ಹುಬ್ಬಳ್ಳಿಯಲ್ಲಿ ಶಿವಳ್ಳಿ  ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಬೆಂಬಲಿಗರು ಸಿಎಸ್ ಶಿವಳ್ಳಿ ಹಾಗೂ ಶಿವಳ್ಳಿಯವರ ಪತ್ನಿ ಕುಸುಮಾ ಪರ ಘೋಷಣೆ ಕೂಗಿದರು. ಕ್ಷೇತ್ರದಲ್ಲಿ ಸಿ ಎಸ್ ಶಿವಳ್ಳಿಯವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಎಲ್ಲಾ ಸಮಾಜದವರ ಪ್ರೀತಿಗೆ ಪಾತ್ರರಾಗಿದ್ದರು. ಅಲ್ಲದೆ ಸಿಎಸ್ ಶಿವಳ್ಳಿಯವರ ಅಕಾಲಿಕ ನಿಧನದಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಬಲ ನಾಯಕರೆಲ್ಲರೂ ಹಾಗೂ ಕುಟುಂಬಸ್ಥರು ಟಿಕೆಟ್ ಕುಸುಮಾ ಶಿವಳ್ಳಿಯರಿಗೆ ನೀಡಬೇಕು ಎಂದು ಅಭಿಪ್ರಾಯ ಹೊಂದಿದ್ದಾರೆ. ಹಾಗಾಗಿ ಮೇ19 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕುಂದಗೋಳ ವಿಧಾನ ಸಭೆ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಅಗ್ರಹಿಸಿದರು. ಯಾವುದೇ ಕಾರಣಕ್ಕೂ ಟಿಕೆಟ್‌ನ್ನು ಕುಸುಮಾ ಶಿವಳ್ಳಿಯವರಿಗೆ ಬಿಟ್ಟು ಯಾರಿಗಾದರೂ ನೀಡಿದಲ್ಲಿ ಬೆಂಬಲ ನೀಡುವುದಿಲ್ಲವೆಂದು ಎಚ್ಚರಿಕೆಯನ್ನು  ಕಾಂಗ್ರೆಸ್‌ನ ನಾಯಕರಿಗೆ ನೀಡಿದ್ದಾರೆ. ಅಲ್ಲದೆ, ಅವರ ನಿಧನದ ನಂತರ ಕಾಂಗ್ರೆಸ್‌ನ ಪ್ರಬಲ ನಾಯಕರಾಗಿ ಗುರುತಿಸಿಕೊಳ್ಳಲು ಅನುವು‌ ಮಾಡಿಕೊಡಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಸುದರ್ಶನರವರಿಗೆ ಮನವಿ ಸಲ್ಲಿಸಿದರು. ಮನವಿಯನ್ನು ಸ್ವೀಕರಿಸಿ ಕೆಪಿಸಿಸಿ ಉಪಾಧ್ಯಕ್ಷ ಸುದರ್ಶನರವರು ಕ್ಷೇತ್ರದ ಟಿಕೆಟ್ ವಿಚಾರವಾಗಿ ಈಗಾಗಲೇ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಬಹುತೇಕರು ಶಿವಳ್ಳಿಯವರ ಪತ್ನಿಗೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಜಿಲ್ಲೆಯ ಎಲ್ಲ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡಿ ನಮ್ಮ ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು. ನಂತರ ಅಂತಿ‌ಮ ತೀರ್ಮಾನವನ್ನು ಅವರೇ ಕೈಗೊಳ್ಳುತ್ತಾರೆ ಎಂದಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv