ಹಾವೇರಿ ತಲುಪಿದ ಮಹಿಳಾ‌ ಸಬಲೀಕರಣ ಜಾಥಾ

ಹಾವೇರಿ: ಮಹಿಳಾ ಸಬಲೀಕರಣದ ಸಂದೇಶ ಸಾರಲು ಬೆಳಗಾವಿಯಿಂದ ಬೆಂಗಳೂರಿಗೆ ಹೊರಟ ಕೆಎಸ್‌ಆರ್‌ಪಿ ಸಿಬ್ಬಂದಿ ಹಾಗೂ ಐಪಿಎಸ್ ಅಧಿಕಾರಿಗಳ ಸೈಕಲ್‌ ಜಾಥಾ ನಗರಕ್ಕೆ ಆಗಮಿಸುತ್ತಿದಂತೆ ಎಸ್​ಪಿ ಪರಶುರಾಮ ಆತ್ಮೀಯವಾಗಿ ಸ್ವಾಗತಿಸಿದರು.

ನಗರದ ಶಿವ ಶಕ್ತಿ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಕೆಲ ಕಾಲ ವಿಶ್ರಾಂತಿ ಪಡೆದರು. ನಂತರ ಮಾತನಾಡಿದ ಎಡಿಜಿಪಿ ಭಾಸ್ಕರ್‌ ರಾವ್‌ ಮಹಿಳಾ ಸಬಲೀಕರಣದ ಬಗ್ಗೆ ಜಾಗೃತಿ ಮೂಡಿಸಲು ಈ ಜಾಥಾ ಆಯೋಜಿಸಲಾಗಿದೆ. ಕೆಎಸ್‌ಆರ್‌ಪಿಯ 85 ಸಿಬ್ಬಂದಿ ಹಾಗೂ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದಾರೆ. ಜಾಥಾಕ್ಕೆ ಜನರಿಂದ ಹಾಗೂ ಸಂಘ ಸಂಸ್ಥೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು. ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಾದರೆ ದೇಶ ಪ್ರಗತಿ ಕಾಣಲಿದೆ. ಮುಖ್ಯವಾಗಿ ನಾವು ಶಿಕ್ಷಣದ ‌ಮಹತ್ವ ಅವಕಾಶ ಹಾಗೂ ಸವಾಲುಗಳ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ‌. ದಾರಿ ಮಧ್ಯದಲ್ಲಿ ಶಾಲೆ ಹಾಗೂ ಖಾಸಗಿ ಸಂಸ್ಥೆಗಳಿಗೂ ಭೇಟಿ ನೀಡುತ್ತಿದ್ದೇವೆ ಮುಂದಿನ ಪ್ರಯಾಣದಲ್ಲಿ ಐಎಎಸ್ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv