ಮೊದಲ ಸಭೆಯಲ್ಲೇ ಅಧಿಕಾರಿಗಳ ಬೆವರಿಳಿಸಿದ ಡಿ.ಕೆ.ಶಿವಕುಮಾರ್..!

ಬೆಂಗಳೂರು: ವಿಧಾನಸೌಧದಲ್ಲಿ ಇಂದಿನಿಂದ ಸಚಿವರ ದರ್ಬಾರ್ ಆರಂಭವಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.

16 ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು ಹಾಗೂ ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಭೆಯ ಆರಂಭದಲ್ಲಿ ಡಿ.ಕೆ.ಶಿವಕುಮಾರ್, ಪ್ರತಿ ಅಧಿಕಾರಿಗಳಿಗೂ ಪರಿಚಯ ಮಾಡುಕೊಳ್ಳುವಂತೆ ಸೂಚನೆ ನೀಡುತ್ತಾರೆ. ಈ ವೇಳೆ ಓರ್ವ ಅಧಿಕಾರಿಯೊಬ್ಬರು ಪರಿಚಯ ಮಾಡಿಕೊಳ್ಳುತ್ತ, ಬೇರೆ ಯಾವುದೋ ವಿಚಾರವನ್ನು ಪ್ರಸ್ತಾಪಿಸಿ ಮಾತನಾಡುತ್ತಾರೆ. ಇದಕ್ಕೆ ಡಿ.ಕೆ.ಶಿವಕುಮಾರ್ ಗರಂ ಆಗಿದ್ದಾರೆ. ಅಧಿಕ ಪ್ರಸಂಗ ಮಾಡಬೇಡಿ, ಎಷ್ಟು ಇದೆಯೋ ಅಷ್ಟು ಮಾತ್ರ ಹೇಳಿ. ಹೆಚ್ಚಿಗೆ ಏನೇನೋ ವಿವರಣೆ ಕೊಡಬೇಡಿ ಅಂತಾ ಅಧಿಕಾರಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಸಚಿವರ ಕೋಪಕ್ಕೆ ಅಧಿಕಾರಿಗಳು ಗಪ್​ಚುಪ್ ಆಗಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv