ಅಪ್ಪಾಜಿ ಹುಮ್ಮಸ್ಸಿನ ಚಿಲುಮೆಯಾಗಿ ನಮ್ಮೊಂದಿಗಿರ್ತಾರೆ: ದರ್ಶನ್‌

ಇಂದು ಸ್ಯಾಂಡಲ್​​ವುಡ್​​ ಕರ್ಣ ರೆಬೆಲ್​​ಸ್ಟಾರ್​​ ಅಂಬರೀಶ್ ಹುಟ್ಟುಹಬ್ಬ. ಈಗಾಗಲೇ ಅಭಿಮಾನಿಗಳು ಸೇರಿದಂತೆ ಕಲಾವಿದರೂ ಅಂಬಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದು, ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದ ಗಂಡು, ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ದರ್ಶನ್ ಕಾರಿನಲ್ಲಿ ಅಂಬರೀಶ್ ಅವರ ಜೊತೆ ಕುಳಿತುಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡಿ ತಮ್ಮ ಅಪ್ಪಾಜಿಯನ್ನು ನೆನಪಿಸಿಕೊಂಡಿದ್ದಾರೆ.

ಅಪ್ಪಾಜಿ ಪ್ರೀತಿ ಅವರ ಕುಟುಂಬ,ಅಭಿಮಾನಿಗಳನ್ನು ಕಾಯುತ್ತೆ!
ಮಂಡ್ಯದ ಗಂಡು ಅಂಬಿ ಅಪ್ಪಾಜಿ ಅವರ ಹುಟ್ಟುಹಬ್ಬ. ದೈಹಿಕವಾಗಿ ನಮ್ಮನ್ನು ಅಗಲಿದರೂ ಸಹ ಮಾನಸಿಕವಾಗಿ ಹುಮ್ಮಸ್ಸಿನ ಚಿಲುಮೆಯಾಗಿ ಸದಾ ನಮ್ಮೊಂದಿಗೆ ಜೀವಂತವಾಗಿರುತ್ತಾರೆ. ಅವರ ಪ್ರೀತಿ-ಆದರ್ಶಗಳು ಸದಾ ಅವರ ಕುಟುಂಬ ಹಾಗೂ ಅಭಿಮಾನಿಗಳನ್ನು ಕಾಯುತ್ತಿರುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv