ದಸರಾ ಆಹ್ವಾನ ಪತ್ರಿಕೆಯಲ್ಲಿ ಸಚಿವ ಖಾದರ್​ ಖಾತೆ ಬದಲಾಯ್ತು!

ಮೈಸೂರು: ದಸರಾ ಆಹ್ವಾನ ಪತ್ರಿಕೆಯಲ್ಲಿ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ. ದಸರಾ ಆಹ್ವಾನ ಪತ್ರಿಕೆಯಲ್ಲಿ ಸಚಿವ ಯು.ಟಿ. ಖಾದರ್​ ಅವರ ಖಾತೆ ಬದಲಾವಣೆ ಮಾಡಿ ಅಧಿಕಾರಿಗಳು ಯಡವಟ್ಟಿಗೆ ಗುರಿಯಾಗಿದ್ದಾರೆ.

ಪ್ರಸ್ತುತ, ಯು.ಟಿ. ಖಾದರ್, ನಗರಾಭಿವೃದ್ಧಿ ಹಾಗೂ ವಸತಿ ಸಚಿವರಾಗಿದ್ದಾರೆ. ಆದರೆ, ಅಧಿಕಾರಿಗಳು ಅಹ್ವಾನ ಪತ್ರಿಕೆಯಲ್ಲಿ ಭಾರಿ ಮತ್ತು ಮಧ್ಯಮ ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂದು ತಪ್ಪು ಮಾಹಿತಿ ಕೊಡಲಾಗಿದೆ. ಖಾದರ್​ ಅವರ ಖಾತೆ ಯಾವುದು ಎಂಬುದು ಅಧಿಕಾರಿಗಳಿಗೆ ತಿಳಿದಿಲ್ವಾ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಮೈಸೂರು ಲಾಂಛನ ಬಿಡುಗಡೆ ಸಮಯದಲ್ಲಿಯೂ ಅಧಿಕಾರಿಗಳು ಯಡವಟ್ಟು ಮಾಡಿಕೊಂಡಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv