ಪ್ರೀತಿ ವಿಚಾರಕ್ಕೆ ಜಗಳ, ಯುವತಿಯ ತಂದೆ ಮೇಲೆ ಗುಂಡು ಹಾರಿಸಿದ ಯೋಧ..!

ದಾವಣಗೆರೆ: ಪ್ರೀತಿಯ ವಿಚಾರವಾಗಿ ವ್ಯಕ್ತಿಯೊಬ್ಬನ ಮೇಲೆ ಯೋಧನೋರ್ವ ಗುಂಡು ಹಾರಿಸಿದ ಆರೋಪ ಕೇಳಿ ಬಂದಿದೆ. ಹೊನ್ನಾಳಿ ತಾಲ್ಲೂಕಿನ‌ ಬಿದರಘಟ್ಟೆ ಗ್ರಾಮದ ಯೋಧ ದೇವರಾಜ್ (27) ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬುವವರ ಮಗಳನ್ನು‌ ಪ್ರೀತಿಸುತ್ತಿದ್ದರು. ಪ್ರೀತಿ ವಿಚಾರವಾಗಿ ದೇವರಾಜ್ ಹಾಗೂ ಯುವತಿ ತಂದೆ ಪ್ರಕಾಶ್ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೋಪಗೊಂಡ ದೇವರಾಜ್, ಪ್ರಕಾಶ್ ಮೇಲೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಕಾಶ್‌ರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಹೊನ್ನಾಳಿ ಪೊಲೀಸರು ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv