ಕರ್ತವ್ಯ ಲೋಪ ಮತ್ತು ಲಂಚದ ಆರೋಪ, ನಗರಸಭೆ ನೈರ್ಮಲ್ಯ ನಿರೀಕ್ಷಕ ವಜಾ..!

ರಾಯಚೂರು: ಸರಿಯಾಗಿ ಕರ್ತವ್ಯ ನಿರ್ವಹಿಸದೇ, ಲಂಚಕ್ಕಾಗಿ ಪೀಡಿಸುತ್ತಿದ್ದ ಆರೋಪದ ಮೇಲೆ ನಗರಸಭೆ ನೈರ್ಮಲ್ಯ ನಿರೀಕ್ಷಕ ಅಖ್ತರ್​ನನ್ನು ಸೇವೆಯಿಂದ ವಜಾಗೊಳಿಸಿ ರಾಯಚೂರು ಜಿಲ್ಲಾಧಿಕಾರಿ ಡಾ: ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ದೂರಿನ ಮೇರೆಗೆ ನೈರ್ಮಲ್ಯ ನಿರೀಕ್ಷಕ ಅಖ್ತರ್​ನನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿಗಳು, ಸೇವೆಯಿಂದಲೇ ವಜಾಗೊಳಿಸಿದ್ದಾರೆ. ಅಲ್ಲದೇ ನಗರಸಭೆ ಕಚೇರಿಯ ಸೂಪರ್ ವೈಸರ್ ನಾಗರಾಜ್​ರನ್ನು ಜಿಲ್ಲೆಯಿಂದ ಎತ್ತಂಗಡಿ ಮಾಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv