ಕಟ್ಟಡ ದುರಂತದಲ್ಲಿ ಇಬ್ಬರ ದುರ್ಮರಣ, ಇನ್ನೂ 30 ಮಂದಿ ಸಿಲುಕಿರುವ ಶಂಕೆ: ಜಿಲ್ಲಾಧಿಕಾರಿ

ಧಾರವಾಡ: ಕಟ್ಟಡ ದುರಂತದಲ್ಲಿ 28 ಜನರನ್ನ ರಕ್ಷಣೆ ಮಾಡಿದ್ದೇವೆ. ಇನ್ನೂ ಸುಮಾರು 25-30 ಜನ ಸಿಲುಕಿರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ದೀಪಾ ಚೋಳನ್, 7 ಜನ ಸಂಪರ್ಕದಲ್ಲಿ ಇದ್ದಾರೆ. ಅವರಿಗೆ ಆಕ್ಸಿಜನ್, ಇನ್ನಿತರ ವ್ಯವಸ್ಥೆ ಮಾಡುತ್ತಿದ್ದೇವೆ. 5 ಜನರ ಎನ್​​ಡಿಆರ್​​​​​ಎಫ್ ತಂಡ ಆಗಿಸುತ್ತಿದೆ. 3 ಗಂಟೆಯಿಂದ ಕಾರ್ಯಾಚರಣೆ ಮಾಡುತ್ತಿದ್ದೇವೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಗೆ ಕಳಪೆ ಕಾಮಗಾರಿ ಅಂತಾ ಮೇಲ್ನೋಟಕ್ಕೆ ಗೊತ್ತಾಗಿದೆ. G+3 ಅಂತಸ್ತಿನ ಕಟ್ಟಡ ಇದ್ದು, ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ನಂತರ ಮಾನತನಾಡಿದ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಎಮ್‌.ಎನ್‌. ನಾಗರಾಜ್, ಘಟನಾ ಸ್ಥಳದಲ್ಲಿ ಮೂರು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ. ಕಲಂ 144ರ ಅಡಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಕಟ್ಟಡದ ಕೆಳಗೆ ಎಲ್ಲೆಲ್ಲಿ ಧ್ವನಿ ಕೇಳಿಸುತ್ತಿದೆ ಅಲ್ಲಿ ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ. ಎನ್‌ಡಿಆರ್‌ಎಫ್ ಬಂದ ತಕ್ಷಣ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಳ್ಳಲಿದೆ. ಅವಶೇಷಗಳನ್ನು ಸಂಪೂರ್ಣ ತೆರವು ಮಾಡುವವರೆಗೆ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ. ನಂತರ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಶಿವಳ್ಳಿ, ಕಟ್ಟಡದ ಅವಶೇಷಗಳಡಿ ಇನ್ನೂ ಬಹಳಷ್ಟು ಜನ ಜೀವಂತವಾಗಿದ್ದಾರೆ. ಅವರನ್ನು ರಕ್ಷಿಸಲು ಭರದ ಕಾರ್ಯ ನಡೆದಿದೆ. ಕಟ್ಟಡ ಗುಣಮಟ್ಟ ಸರಿಯಿಲ್ಲದ ಕಾರಣ ಈ ದುರ್ಘಟನೆ ಆಗಿದೆ. ಯಾರೇ ಇದ್ದರೂ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವಿ. ಮೊದಲಿಗೆ ಕಟ್ಟಡದೊಳಗೆ ಇದ್ದವರನ್ನು ರಕ್ಷಿಸುವುದೇ ನಮ್ಮ ಮೊದಲ ಆದ್ಯತೆ. ಗಾಯಾಳುಗಳ ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv