ಬಂದ್​ ಹಿನ್ನೆಲೆ: ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಮನಗರ: ಕೇಂದ್ರ ಸರ್ಕಾರದ ಪೆಟ್ರೋಲ್​, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಳೆ ಭಾರತ್ ಬಂದ್​ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ರಾಮನಗರ ಜಿಲ್ಲಾಧಿಕಾರಿ ಕೆ. ರಾಜೇಂದ್ರ ಅಧಿಕೃತ ಆದೇಶ ಹೊರಡಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv