ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮಂಜುನಾಥ ಭೇಟಿ, ಪರಿಶೀಲನೆ

ಯಾದಗಿರಿ: ನಾಳೆ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಮಂಜುನಾಥ ಮತ ಎಣಿಕೆ ಕೇಂದ್ರವಾದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ನಾಳೆ ಬೆಳಗ್ಗೆ 7 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು. ಜಿಲ್ಲಾಡಳಿತ ಸಕಲ ತಯಾರಿ ಮಾಡಿಕೊಂಡಿದೆ. ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ 8 ಕೊಠಡಿಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಂದು ಕೊಠಡಿಯಲ್ಲಿ 7 ಟೇಬಲ್ ವ್ಯವಸ್ಥೆ ಮಾಡಲಾಗಿದ್ದು. 350ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರ ಸುತ್ತ ಬಿಗಿ ಪೊಲೀಸ್​ ಬಂದೋಬಸ್ತ್​ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv