ಲಿಂಗಾಯತ ಕೋಟಾದಲ್ಲಿ ಡಿಸಿಎಂ ಸ್ಥಾನ ಸಿಗುತ್ತಾ?

ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಉಪಮುಖ್ಯ ಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಆಗ್ರಹಿಸಿದೆ‌. ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರಲ್ಲಿ ಹಿರಿಯರು ಹಾಗು ವೀರಶೈವ ಮುಖಂಡರು ಆದಂತಹ ಶ್ಯಾಮನೂರು ಶಿವಶಂಕರಪ್ಪ ಅವರಿಗೆ ಉಪಮುಖ್ಯ ಮಂತ್ರಿ ಹುದ್ದೆಯನ್ನು ನೀಡಬೇಕೆಂದು ನಿಯೋಜಿತ ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಒತ್ತಾಯಿಸಿದ್ದಾರೆ. ಶಿವಶಂಕರಪ್ಪನವರು ಈ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇವರಿಗೆ ಯಾವುದೇ ಖಾತೆಯನ್ನು ನೀಡಿದ್ದರು ಸಮರ್ಥವಾಗಿ ನಿಭಾಯುಸುತ್ತಾರೆ. ಹೀಗಾಗಿ ಇವರಿಗೆ ಸಚಿವ ಸಂಪುಟದದಲ್ಲಿ ಸೂಕ್ತ ಸ್ಥಾನಮಾನ‌ನೀಡಬೇಕೆಂದು ವೀರಶೈವ ಮಹಾಸಭಾ ಸದಸ್ಯರು ಕೇಳಿದ್ದಾರೆ. ಇಲ್ಲದಿದ್ದರೆ ವೀರಶೈವ ಸಮಾಜದ ವತಿಯಿಂದ ಪ್ರತಿಭಟನೆ ಹಾಗೂ ರಾಜ್ಯಾದ್ಯಂತ ಹೋರಾಟವನ್ನು ಮಾಡಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv