ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಆಗ್ರಹ

ರಾಯಚೂರು: ಸಮಪರ್ಕವಾಗಿ ಕಸ ವಿಲೇವಾರಿ ಮಾಡುವಂತೆ ಆಗ್ರಹಿಸಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಜಾಲಹಳ್ಳಿ ಗ್ರಾಮ ಪಂಚಾಯತಿ ಕಚೇರಿ ಎದುರು ಸಾರ್ವಜನಿಕರು, ವರ್ತಕರು ಸೇರಿಕೊಂಡು ಧರಣಿ ನಡೆಸಿದರು. ಬೀದಿಯಲ್ಲಿ ಬೀಳುವ ಕಸವನ್ನು ಗ್ರಾಮ ಪಂಚಾಯತಿಯವರು ವಿಲೇವಾರಿ ಮಾಡದೇ, ಅಲ್ಲೇ ಬೆಂಕಿ ಹಚ್ಚಿ ಸುಡುತ್ತಿದ್ದಾರೆ. ಇದರಿಂದ ಪರಿಸರ ಮಾಲಿನ್ಯವಾಗುವುದರ, ಜೊತೆಗೆ ಸುತ್ತ ಮುತ್ತಲಿನ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಗ್ರಾಮ ಪಂಚಾಯತಿ ಅಧಿಕಾರಿಗಳು, ಜನಪ್ರತಿನಿಧಿಗಳು ಪಟ್ಟಣದ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕೆಂದು ಆಗ್ರಹಿಸಿದರು. ಪ್ರತಿಭಟನೆಗೆ ಪಟ್ಟಣದ ಕೆಲ ಸಂಘಟನೆಗಳು ಸಾಥ್ ನೀಡಿದ್ವು.

ನಿಮ್ಮ ಸಲಹೆ ಸೂಚನೆ ಮತ್ತು ಅಬಿಪ್ರಾಯಕ್ಕಾಗಿ ಸಂರ್ಪಕಿಸಿ:contact@firstnews.tv