ಮರಳು ಪೂರೈಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರೊಟೆಸ್ಟ್

ದಾವಣಗೆರೆ: ಮರಳು ಪೂರೈಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಂದು ಹೊನ್ನಾಳಿ ಬಂದ್‌ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೇತ್ರತ್ವದಲ್ಲಿ ಹೊನ್ನಾಳಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗ್ತಿದೆ. ಹೊನ್ನಾಳಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಟೈಯರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ರು. ಅಲ್ಲದೇ ಹೊನ್ನಾಳಿ ಪಟ್ಟಣದ ಟಿಬಿ ವೃತ್ತದ ಬಳಿ ಪ್ರತಿಭಟನಾಕಾರರು ಬಸ್ ತಡೆದು, ಶಿವಮೊಗ್ಗ -ಹರಿಹರ ರಾಜ್ಯ ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ರು. ತಾಲೂಕಿನ ಜನರಿಗೆ ಮರಳು ಪೂರೈಕೆಗೆ ಮಾಡಬೇಕು ಹಾಗೂ ಹೊನ್ನಾಳಿ ತಾಲೂಕನ್ನ ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಹೊನ್ನಳ್ಳಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv