ಕೊಟ್ಟ ಮಾತಿನಂತೆ ನಡ್ಕೊಳ್ಳೋದಾದ್ರೆ ರೇವಣ್ಣ ರಾಜಕೀಯ ಸನ್ಯಾಸ ಸ್ವೀಕರಿಸಲಿ: ಪ್ರೀತಂಗೌಡ

ಹಾಸನ: ಕುಟುಂಬ ರಾಜಕಾರಣದಿಂದ ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸಿ ಸೋತಿದ್ದಾರೆ ಎಂದು ಶಾಸಕ ಪ್ರೀತಂ ಗೌಡ ಆರೋಪಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಪ್ರೀತಂಗೌಡ, ಈ‌ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎಂದು ಹುಡುಕುವಂತಾಗಿದೆ. ಇನ್ಮುಂದೆ ಹಾಸನ‌ದಲ್ಲಿ ಎಲ್ಲಾ‌ ಚುನಾವಣೆಗಳು ‌ಬಿಜೆಪಿ-ಜೆಡಿಎಸ್ ನಡುವೆ ಹಣಾಹಣಿ ನಡೆಯಲಿದೆ. ಜಿಲ್ಲೆಯಲ್ಲಿ ಬಿಜೆಪಿ‌ ಬೆಳೆವಣಿಗೆಗೆ ಆರೋಗ್ಯಕರ ವಾತಾವರಣ ಇದೆ. ನೂತನ ಸಂಸದರಾಗಿ ಆಯ್ಕೆ ಆಗಿರುವ ಪ್ರಜ್ವಲ್ ರೇವಣ್ಣಗೆ ಅಭಿನಂದನೆಗಳು ಎಂದರು.

ಪ್ರಜ್ವಲ್ ರೇವಣ್ಣ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪ್ರೀತಂ ಗೌಡ, ಪ್ರಜ್ವಲ್  ಮೊದಲು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಬೇಕು. ಆನಂತರ ಸ್ಪೀಕರ್​ಗೆ ರಾಜೀನಾಮೆ ಸಲ್ಲಿಸಬೇಕು. ಅದಕ್ಕೂ ಮೊದಲೇ ರಾಜೀನಾಮೆ ನೀಡುತ್ತೇನೆ ಎಂದು ಹೇಳೋದು ಸರಿಯಲ್ಲ ಎಂದರು.

ನಾನು ನಿಂಬೆಹಣ್ಣು ಹಿಡಿದುಕೊಂಡು ಶಾಸ್ತ್ರ ಹೇಳುವುದಿಲ್ಲ. ರೇವಣ್ಣ ಅವರು ಈ ಹಿಂದೆ ಮೋದಿ ಪ್ರಧಾನಿಯಾದರೆ ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದಿದ್ದರು. ಈಗ ಅವರು ಮಾತಿಗೆ ತಕ್ಕಂತೆ ನಡೆದು ಕೊಳ್ಳಬೇಕು ಎಂದು ಆಗ್ರಹಿಸಿದ್ದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv