ಧರ್ಮಸ್ಥಳದ ರತ್ನಗಿರಿ ಬಾಹುಬಲಿಗೆ ಮಸ್ತಕಾಭಿಷೇಕ

ಮಂಗಳೂರು: ದಕ್ಷಿಣ ಭಾರತದ ಹೆಸರಾಂತ ಪುಣ್ಯಕ್ಷೇತ್ರ ಧರ್ಮಸ್ಥಳದ ರತ್ನಗಿರಿ ಬೆಟ್ಟದಲ್ಲಿ ವಿರಾಜಮಾನನಾದ ವೈರಾಗ್ಯ ಮೂರ್ತಿ, ತ್ಯಾಗದ ಸಂಕೇತ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ ಸಂಭ್ರಮದ ಹಿನ್ನೆಲೆಯಲ್ಲಿ ಇಂದು ಸಂತ ಸಮ್ಮೇಳನವೂ ನಡೆಯಿತು.

ಸಮ್ಮೇಳನಕ್ಕೂ ಮೊದಲು‌‌ ಸಂತರ ಮೆರವಣಿಗೆ ನಡೆಸಲಾಯಿತು. ನಂತರ ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಭವನದಲ್ಲಿ‌ ನಡೆದ ಸಂತ ಸಮ್ಮೇಳನವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ, ಮಸ್ತಕಾಭೀಷೇಕದ ಶುಭಾಶಯಗೈದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕಾರ್ಕಳದ ಲಲಿತ ಕೀರ್ತಿ ಭಟ್ಟಾರಕ ಮಹಾಸ್ವಾಮಿ ವಹಿಸಿದರು.

108 ವರ್ಧಮಾನ ಸಾಗರಜೀ ಮುನಿ ಮಹಾರಾಜರು, ವಾತ್ಸಲ್ಯ ವಾರಿಧಿ 108 ಪುಷ್ಪದಂತ ಸಾಗರ ಮುನಿ ಮಹಾರಾಜರು, ಒಡಿಯೂರು ಮಠದ ಗುರುದೇವಾನಂದ ಸ್ವಾಮೀಜಿ, ಶ್ರೀ ಧಾಮ ಮಾಣಿಲ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ, ಬಾರಕೂರು ಸಂಸ್ಥಾನದ ಸಂತೋಷ್ ಗುರೂಜಿ ಮತ್ತು ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮಿ ಉಪಸ್ಥಿತರಿದ್ರು.


 

 

 

 

 

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv