ಕಟ್ಟಡ ಕುಸಿತ ಪ್ರಕರಣ: ಕಂದಾಯ ಇಲಾಖೆ ಅಧಿಕಾರಿ ಸ್ಥಳಕ್ಕೆ ಭೇಟಿ, ಪರಿಶೀಲನೆ

ಧಾರವಾಡ: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಕತ್ರಿ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ಘಟನೆ ಬಗ್ಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದರು. ಈ ವೇಳೆ ಅಡಿಷನಲ್ ಅಡ್ವೋಕೇಟ್ ಜನರಲ್ ದಿನೇಶ್ ರಾವ್ ಸಹ ಜೊತೆಗಿದ್ದರು.

ಇನ್ನು ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆ ಮುಂದುವರೆದಿದೆ. ಸುರಂಗ ತೆಗೆದು ಅಗ್ನಿಶಾಮ ಸಿಬ್ಬಂದಿ ರಕ್ಷಣೆಗೆ ಇಳಿದಿದ್ದಾರೆ. ಅವಶೇಷಗಳ ಅಡಿ ಸಿಲುಕಿರುವ ಸಂಗೀತಾ ಹಾಗೂ ದಿಲೀಪ್ ಎಂಬವರ ಜೊತೆ ಮಾತುಕತೆ ನಡೆಸಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv