ಜಾತಿ ಆಧಾರದ ಮೇಲೆ ಚುನಾವಣೆಗಳು ನಡೆಯುವುದಿಲ್ಲ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತು ನಾನು ಏನೂ ಹೇಳುವ ಅವಶ್ಯಕತೆ ಇಲ್ಲ. ಹಿಂದೆ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಜನ ಉತ್ತರ ನೀಡಿದ್ದಾರೆ. ಈ ಹಿಂದೆ ಮಾಡುತ್ತೇವೆ ಅಂದವರು ಅವರೇ. ಈಗ ಇಲ್ಲವೆಂದು ಹೇಳುತ್ತಿರುವವರು ಅವರೇ. ಲಿಂಗಾಯತ ಪ್ರತ್ಯೇಕ ಧರ್ಮದ ಮುಖಂಡರಲ್ಲಿ ಸ್ಪಷ್ಟತೆ ಇರಬೇಕಾಗುತ್ತೆ ಎಂದು ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪ್ರಲ್ಹಾದ್ ಜೋಶಿ, ಆ ಸಮಾಜ ಮುಖಂಡರು ನಮ್ಮ ಪಕ್ಷದ ಎಲ್ಲ ಜನಪ್ರತಿನಿಧಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಜಾತಿ ಆಧಾರದ ಮೇಲೆ ಯಾವ ಚುನಾವಣೆಗಳು ನಡೆಯುವುದಿಲ್ಲ. ಲೋಕಸಭಾ ಚುನಾವಣೆಯು ಜಾತಿ ಮೇಲೆ ನಡೆಯುವುದಿಲ್ಲ. ಇಲ್ಲಿನ ಜನತೆ ಅಭಿವೃದ್ಧಿ, ಸಭ್ಯತೆ ಹಾಗೂ ಸುಸಂಸ್ಕೃತರನ್ನು ನೋಡಿ ಮತ ಹಾಕುತ್ತಾರೆ. ಧಾರವಾಡ ಕ್ಷೇತ್ರ ಸುಸಂಸ್ಕೃತರಿಗೆ ಮತ ನೀಡುತ್ತಾರೆ. ಅವರಿಗೆ ಯಾರು ಸಭ್ಯರು ಎನ್ನುವುದು ಗೊತ್ತಿದೆ ಎಂದು ಹೇಳಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv