ಎಳ್ಳು-ನೀರು ಬಿಟ್ಟು ಕೇಂದ್ರದ ವಿರುದ್ಧ ಪ್ರತಿಭಟನೆ

ದಾವಣಗೆರೆ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಎಳ್ಳು-ನೀರು ಬಿಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದ ಪ್ರಸಂಗ ಇಂದು ನಗರದಲ್ಲಿ ನಡೆದಿದೆ.
ಮಹಾನಗರಪಾಲಿಕೆ ಮುಂದೆ ಪ್ರಧಾನಿ ಮೋದಿ ಭಾವಚಿತ್ರಕ್ಕೆ ವಡೆ ಇಟ್ಟು, ಎಳ್ಳು ನೀರು ಬಿಟ್ಟು, ಪೂಜೆ ಸಲ್ಲಿಸಿ ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ಪಿತೃ ಪಕ್ಷ ಆಚರಣೆ ಮಾಡೋ ಮೂಲಕ, ಏರಿಕೆಯಾಗಿರುವ ಇಂಧನ ಬೆಲೆಯನ್ನು ಖಂಡಿಸಿದರು. ಅಧಿಕಾರಕ್ಕೆ ಬರುವ ಮುನ್ನ ಮೋದಿ ನೀಡಿದ್ದ ಭರವಸೆಗಳ್ಯಾವೂ ಈವರೆಗೂ ಈಡೇರಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv