ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಮುಗಿದ ಅಧ್ಯಾಯ: ದಿನೇಶ್ ಗುಂಡೂರಾವ್

ಹುಬ್ಬಳ್ಳಿ: ಭಯೋತ್ಪಾದನೆ, ಭದ್ರತೆ ಒಂದೇ ವಿಚಾರದಲ್ಲಿ ಮೋದಿ ಚುನಾವಣೆಗೆ ಹೊರಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಹರಿಹಾಯ್ದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಜಮ್ಮು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳ ಪರ ಒಲವು ಇರುವವರ ಜೊತೆ ಸೇರಿ ಸರ್ಕಾರ ಮಾಡಿದ್ರು. ದೇಶದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹಾಳಾಗಿದೆ ಎಂದು ವಾಗ್ದಾಳಿ ನಡೆಸಿದ್ರು. ಪ್ರಹ್ಲಾದ್ ಜೋಶಿಯಷ್ಟು ಸುಳ್ಳು ಹೇಳಿದಷ್ಟು ಯಾರು ಹೇಳಿಲ್ಲ. ರೈತರಿಗೆ ಪ್ರಹ್ಲಾದ್ ಜೋಶಿ ಸುಳ್ಳು ಹೇಳಿ ಯಾಮಾರಿಸಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಮುಗಿದ ಅಧ್ಯಾಯ. ಮೋದಿಯಂತ ಓರ್ವ ಮಾಫಿಯಾ ನಾಯಕ‌ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಇಡಿ, ಐಟಿ, ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರ ನಡೆಸಿದ್ದಾರೆ ಎಂದು ದಿನೇಶ್ ಗುಂಡುರಾವ್ ಆರೋಪಿಸಿದರು.

Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv