‘ಬಳ್ಳಾರಿ ಕ್ಯಾಂಡಿಡೇಟ್:​ ರಾಹುಲ್​ ಜತೆ ಚರ್ಚಿಸಿ, ಫೈನಲ್ ಮಾಡ್ತೇವೆ’

ಬೆಂಗಳೂರು: ಬಳ್ಳಾರಿ ಉಪ ಚುನಾವಣೆಗೆ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಸಿದ್ದೇವೆ. ನಾಳೆ ರಾಹುಲ್ ಗಾಂಧಿಯವರ ಜೊತೆ ಚರ್ಚಿಸಿ ಅಭ್ಯರ್ಥಿ ಫೈನಲ್ ಮಾಡ್ತೇವೆ ಅಂತಾ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಪಿಸಿಸಿ ಸಭೆ ಬಳಿಕೆ ಮಾತನಾಡಿ ಅವರು, ಕಾಂಗ್ರೆಸ್ ಬಳ್ಳಾರಿಯಲ್ಲಿ ಶಕ್ತಿ ಹೊಂದಿದೆ. ಜಿಲ್ಲೆಯಲ್ಲಿ ಆರೂ ಶಾಸಕರೂ ಒಗ್ಗಟ್ಟಾಗಿದ್ದಾರೆ. ಇಂದು ರಾತ್ರಿ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅವರೊಂದಿಗೂ ಚರ್ಚಿಸುತ್ತೇವೆ. ನಾಳೆ ಸಂಜೆ ಇಲ್ಲವೇ ಅಕ್ಟೋಬರ್​15 ರಂದು ಅಧಿಕೃತವಾಗಿ ಘೋಷಿಸುತ್ತೇವೆ. ಯಾರೇ ಅಭ್ಯರ್ಥಿಯಾದ್ರೂ ನಮ್ಮ ಅಭ್ಯರ್ಥಿ ಗೆಲುವು ಖಚಿತ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ರು.
ಎನ್. ಮಹೇಶ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿ, ಮಹೇಶ್ ರಾಜೀನಾಮೆ ಮೈತ್ರಿ ಸರ್ಕಾರದ ಮೇಲೆ ಪರಿಣಾಮ ಬೀರುವುದಿಲ್ಲ. ಅವರು ಮೈತ್ರಿ ಸರ್ಕಾರಕ್ಕೆ ಬೆಂಬಲಿಸೋದಾಗಿ ಹೇಳಿದ್ದಾರೆ. ರಾಜೀನಾಮೆ ಇಂದ ಬಿಜೆಪಿಗೆ ಶಕ್ತಿ ಬಂದಿಲ್ಲ. ಬಿಜೆಪಿಗೆ ಶಕ್ತಿ ಇಲ್ಲದ ಕಾರಣ ಬೇರೆ ಪಕ್ಷದ ಶಾಸಕರನ್ನ ಹುಡುಕುತ್ತಿದ್ದಾರೆ ಅಂತಾ ಕಿಡಿಕಾರಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv